ಹೃದಯಾಘಾತದಿಂದ ಮೃತಪಟ್ಟ ಎಎಸ್‌ಐ

ಕುಮಟಾ: ಇಲ್ಲಿನ ಪೋಲಿಸ್ ಠಾಣೆಯಲ್ಲಿ ಎ.ಎಸ್.ಐ ಆಗಿದ್ದ ಶನವಾಜ್ ತಡಕೋಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಂಕೋಲಾ, ದಾಂಡೇಲಿ, ಹಳಿಯಾಳದಲ್ಲಿ ಸೇವೆ ಸಲ್ಲಿಸಿದ್ದ ಶನವಾಜ್ ಅವರು ಎ.ಎಸ್.ಐ ಆಗಿ ಪದೋನ್ನತಿಯ ಮೂಲಕ ಕುಮಟಾ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಎರಡೇ ಎರಡು ತಿಂಗಳಿನಲ್ಲಿ ವೃತ್ತಿಯಿಂದ ನಿವೃತ್ತಿ ಹೊಂದುವವರಿದ್ದರು. ಆದರೆ ಇದೀಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೃತರು ತಮ್ಮ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ನಿಧನರಾಗಿದ್ದಾರೆ. ಮೂತಃ ಧಾರವಾಡದವರಾದ ಶನವಾಜ್ ತಡಕೋಡ ಅವರು ಕಳೆದ ಅನೇಕ ವರ್ಷದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನದಿಂದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿವರ್ಗ, ಕಂಬನಿ ಮಿಡಿದಿದೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version