ಹೆಂಡತಿಗೆ ಸೀರೆ ಇಷ್ಟವಾಗಿಲ್ವಂತೆ: ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿದ ಗಂಡ!

ಶಿರಸಿ: ಅಂಗಡಿಯಲ್ಲಿ ಕೊಂಡ ಸೀರೆ ಪತ್ನಿಗೆ ಇಷ್ಟವಾಗದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕನಿಗೆ ಗ್ರಾಹಕನೋರ್ವ ಸ್ನೇಹಿತನೊಂದಿಗೆ ಸೇರಿ ಹಲ್ಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಹೌದು,.. ಶಿರಸಿಯ ಮೊಹಮ್ಮದ್ ಎಂಬಾತನೆ ಹಲ್ಲೆ ಮಾಡಿದ ವ್ಯಕ್ತಿ. ಬಲರಾಮ್ ಎನ್ನುವವರೇ ಹಲ್ಲೆಗೊಳಗಾದ ಅಂಗಡಿ ಮಾಲೀಕ. ಶಿರಸಿ ತಾಲೂಕಿನ ಸಿಪಿ ಬಜಾರದಲ್ಲಿರುವ ಸಾಗರ ಬಟ್ಟೆ ಅಂಗಡಿಯಲ್ಲಿ ಆರೋಪಿ ಮೊಹಮ್ಮದ್ ಪತ್ನಿಗೆಂದು ಸೀರೆ ತೆಗೆದುಕೊಂಡು ಹೋಗಿದ್ದ. ಆ ಸೀರೆ ಪತ್ನಿಗೆ ಇಷ್ಟ ಆಗದ ಹಿನ್ನೆಲೆಯಲ್ಲಿ ಅಂಗಡಿಗೆ ಪುನಃ ಬಂದು ಇನ್ನುಳಿದ ಸೀರೆ ನೋಡಿದ್ದಾನೆ.

ಆದರೆ ಅಂಗಡಿಯಲ್ಲಿರುವ ಯಾವುದೇ ಸೀರೆ ಪತ್ನಿಗೆ ಇಷ್ಟ ಆಗಿಲ್ಲವಾಗಿದ್ದು, ಹೀಗಾಗಿ ಸಿಟ್ಟುಗೊಂಡ ಮೊಹಮ್ಮದ್ ಒಳ್ಳೆ ಬಟ್ಟೆ ಇಡೋಕೆ ಆಗಲ್ವಾ ಎಂದು ಅವಾಚ್ಯ ಪದ ಬಳಕೆ ಮಾಡಿದ್ದಾನೆ. ಬಳಿಕ ಅಂಗಡಿ ಮಾಲೀಕ, ನಿನ್ನ ಹಣ ವಾಪಾಸ್ ಕೊಡುತ್ತೇನೆ., ತೆಗೆಕೊಂಡು ಹೋಗು. ಆದರೆ ಅವಾಚ್ಯ ಶಬ್ಧಗಳಿಂದ ಬೈಬೇಡ ಎಂದಿದ್ದ.

ನಂಗೆ ಹಣ ಏನ್ ಕೊಡ್ತಿಯಾ ಸರಿಯಾಗಿ ಬಟ್ಟೆ ಇಡೋಕೆ ಆಗಲ್ವಾ ಎಂದು ತಕರಾರು ತೆಗೆದು ಹೊರಗಡೆಯಿಂದ ಸರ್ಪರಾಜ್ ಎಂಬ ಗೆಳೆಯನನ್ನು ಕರೆಸಿ ಅಂಗಡಿ ಮಾಲೀಕ ಹಾಗೂ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಘಟನೆ ಸಂಬoಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ.

Exit mobile version