ರಾಜ್ಯದ 10 ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ : ಹಾಲೀ ಸಂಸದ ಅನಂತಕುಮಾರ್ ಹೆಗಡೆಗೆ ಮತ್ತೊಮ್ಮೆ ಟಿಕೆಟ್ ಘೊಷಣೆ ಸಾಧ್ಯತೆ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪೆಬ್ರುವರಿ 29 ಕ್ಕೆ ಬಿಡುಗಡೆ

ಕಾರವಾರ: ರಾಜ್ಯದ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪೆಬ್ರುವರಿ 29 ರಂದು ಪ್ರಕಟಗೊಳ್ಳಲಿದ್ದು, ರಾಜ್ಯದ 10 ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ. 10 ಕ್ಷೇತ್ರಗಳ ಪಟ್ಟಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವೂ ಸೇರಿದ್ದು, ಹಾಲೀ ಸಂಸದ ಅನಂತಕುಮಾರ್ ಹೆಗಡೆಗೆ ಮತ್ತೊಮ್ಮೆ ಟಿಕೆಟ್ ಘೊಷಣೆಯಾಗಲಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದ್ದು, ಇದೇ ತಿಂಗಳ 29 ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮೀತಿಯ ಸಭೆ ನಡೆಯಲಿದೆ. ಅಂದು ಸುಮಾರು 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಉನ್ನತ ಮೂಲಗಳು ಹೇಳಿವೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹಾಲಿ 10 ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ಘೋಷಣೆಯಾಗುವ ಸಾದ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ. 29 ರಂದು ನಡೆಯುಇವ ಚುನಾವಣಾ ಸಂಇತಿಯ ಸಭೆಯಲ್ಲಿ ರಾಜ್ಯದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟಿಯ ಸಂಘಟನಾ ಪ್ರಧಾನಮ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವೂ ಸೇರಿದ್ದು, ಹಾಲೀ ಸಂಸದ ಅನಂತಕುಮಾರ್ ಹೆಗಡೆಗೆ ಮತ್ತೊಮ್ಮೆ ಟಿಕೆಟ್ ಘೊಷಣೆಯಾಗುವ ಸಾಧ್ಯತೆ ದಟ್ಟವಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version