Murudeshwar Temple: ವಿಶ್ವಪ್ರಸಿದ್ಧ ಮುರ್ಡೇಶ್ವರದಲ್ಲಿ ಸಂಭ್ರಮ-ಸಡಗರದಿಂದ ಶಿವರಾತ್ರಿ ಆಚರಣೆ

ಮುರ್ಡೇಶ್ವರ: ( Murudeshwar Temple) ಮಹಾಶಿವರಾತ್ರಿ ಅಂಗವಾಗಿ ಮುರ್ಡೇಶ್ವರದಲ್ಲಿ ಬೆಳ್ಳಿಗ್ಗೆ 10 ಗಂಟೆ ವೇಳೆಗೆ 5 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸಿ ದೇವರ ದರ್ಶನ ಪಡೆದರು. ಶಿವನ ಪಂಚಕ್ಷೇತ್ರಗಳಲ್ಲೊoದಾದ ಶ್ರೀ ಮುರ್ಡೇಶ್ವರ ದೇವರಿಗೆ ಶಿವರಾತ್ರಿಯ ನಿಮಿತ್ತ ಈ ಬಾರಿ ವಿಶೇಷವಾಗಿ ಮುಂಜಾನೆ ನಸುಕಿನ ವೇಳೆ 3 ಗಂಟೆಯಿoದಲೇ ದೇವರ ದರ್ಶನಕ್ಕೆ ಅನುವು ಮಾಡುಕೊಡಲಾಗಿದ್ದು ಈ ಹಿನ್ನೆಲೆ ಭಕ್ತರ ಸಾಲು ದೇವಸ್ಥಾನದ ಹೊರಾಂಗಣದ ವರೆಗೂ ಸರದಿ ಸಾಲು ಬಂದಿತ್ತು.

Murudeshwar Temple ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಧಾರ್ಮಿಕ ಕಾರ್ಯಗಳು ನಡೆಯಿತು. ಪರಶಿವನಿಗೆ ರುದ್ರಾಭಿಷೇಕ, ಜಲಾಭಿಷೇಕ, ಬಿಲ್ವಪತ್ರ ಅರ್ಚನೆ ಮುಂತಾದ ಕಾರ್ಯಗಳು ನಡೆಯಿತು. ಮುರ್ಡೇಶ್ವರಕ್ಕೆ ಭೇಟಿ ನೀಡಿದ ಭಕ್ತಾಧಿಗಳು ಸಮುದ್ರಸ್ನಾನ ಮಾಡಿ ದೇವರಿಗೆ ವಿವಿಧ ರೂಪದಲ್ಲಿ ಅಭಿಷೇಕದೊಂದಿಗೆ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸಿದರು. ದೇವರ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಭಕ್ತರು ಜತೆಗೆ ದೂರದೂರುಗಳಿಂದ ಬಂದಿದ್ದ ಪ್ರವಾಸಿಗರು ಸಾಲಿನಲ್ಲಿ ನಿಂತಿದ್ದರು.

ಸಮುದ್ರತೀರ ಮತ್ತು ದೇವಸ್ಥಾನದ ಸುತ್ತಮುತ್ತ ಜನಜಾತ್ರೆಯೇ ನೆರೆದಿತ್ತು. 3 ಗಂಟೆಗೆ ದೇವರ ದರ್ಶನಕ್ಕೆ ಅನುವುಮಾಡಿಕೊಟ್ಟ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ಭಕ್ತರು ಮುರುಡೇಶ್ವರಕ್ಕೆ ಆಗಮಿಸಿದರು. ದೇವಸ್ಥಾನ ದಲ್ಲಿ ಈ ಬಾರಿ ಸ್ಥಳೀಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ್ದು ವಿಶೇಷವಾಗಿತ್ತು.

ಮುರ್ಡೇಶ್ವರ ಕೇವಲ ಧಾರ್ಮಿಕ ಕ್ಷೇತ್ರವಷ್ಟೇ ಅಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿ ಕೇಂದ್ರವಾಗಿಯೂ ಖ್ಯಾತಿ ಪಡೆದಿದೆ. ನಿತ್ಯ ಸಾವಿರಾರು ಭಕ್ತಾಧಿಗಳು ಮುರ್ಡೇಶ್ವರಕ್ಕೆ ಭೇಟಿ ನೀಡುತ್ತಾರೆ. ಶಿವರಾತ್ರಿ ಸೇರಿದಂತೆ ವಿಶೇಷ ದಿನಗಳಲ್ಲಿ ಮತ್ತಷ್ಟು ಜನಜಂಗುಳಿ ನೆರೆದಿರುತ್ತದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version