Job News
Trending

Surveyor Recruitment: 364 ಹುದ್ದೆಗಳ ನೇಮಕಾತಿ: 47 ಸಾವಿರ ಮಾಸಿಕ ವೇತನ: ಪಿಯುಸಿ, ಡಿಪ್ಲೋಮಾ, ಐಟಿಐ ಪಾಸ್ ಆದವರು Apply ಮಾಡಿ

ಏಪ್ರಿಲ್ 10, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಒಟ್ಟು 364 ಹುದ್ದೆಗಳ ( Surveyor jobs) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ( KPSC Recruitment 2024 ) ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ( Surveyor Recruitment) ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಪಿಯುಸಿ, ಡಿಪ್ಲೋಮಾ, ಐಟಿಐ ಪಾಸ್ ಆದವರೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನ, 23,500 ರೂಪಾಯಿಯಿಂದ 47,650 ರೂಪಾಯಿ ಇರಲಿದೆ.

ಇದನ್ನೂ ಓದಿ: SSC Recruitment 2024 : 2049 ಹುದ್ದೆಗಳಿಗೆ ನೇಮಕಾತಿ: SSLC, PUC, Degree ಆದವರು ಅರ್ಜಿ ಸಲ್ಲಿಸಿ

(KPSC Recruitment 2024 ) ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಮಾರ್ಚ್ 11, 2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 10, 2024 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿದೆ. ( Surveyor Recruitment) ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿದ್ದು, ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ಒಟ್ಟು ಹುದ್ದೆಗಳು364
ಇಲಾಖೆಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ
ಅರ್ಜಿ ಸಲ್ಲಿಕೆ ಆರಂಭಮಾರ್ಚ್ 11, 2024
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 10, 2024

ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪಿಯುಸಿ ಅಥವಾ ಸಿಬಿಎಸ್‌ಇ/ಐಸಿಎಸ್‌ಇಯ 12ನೇ ತರಗತಿ ಉತ್ತೀರ್ಣರಾಗಿರಬೇಕು (ಗಣಿತ ವಿಷಯದಲ್ಲಿ 60% ಅಂಕ ಪಡೆದಿರಬೇಕು). ಅಥವಾ ಕರ್ನಾಟಕ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ & ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾ ಉತ್ತೀರ್ಣವಾಗಿರಬೇಕು. ಇಲ್ಲವೇ ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್‌ನಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದಾಗಿದೆ.

ಸಾಮಾನ್ಯ ಹಾಗು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 600 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳು 50 ರೂಪಾಯಿ ಮತ್ತು ಅರ್ಜಿ ಶುಲ್ಕ ಪಾವತಿಸಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

( Surveyor jobs ) ಭೂಮಾಪಕರ (ಎಚ್‌ಕೆ) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ತಾತ್ಕಾಲಿಕ ದಿನಾಂಕ ಜುಲೈ 6, 2024 ಮತ್ತು ಭೂಮಾಪಕರ (ಎಚ್‌ಕೆ) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ ಜುಲೈ 7, 2024 ಆಗಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ವಿದ್ಯಾರ್ಹತೆಪಿಯುಸಿ, ಡಿಪ್ಲೋಮಾ, ಐಟಿಐ
ಮಾಸಿಕ ವೇತನ23,500 ರೂಪಾಯಿಯಿಂದ 47,650 ರೂಪಾಯಿ
ಅಧಿಕೃತ ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button