ಕಾರವಾರ: ಈ ಬಾರಿ ಬೇಸಿಗೆ ಪ್ರಾರಂಭದಲ್ಲಿಯೇ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಇದರಿಂದಾಗಿ ಜನರು ತತ್ತರಿಸುವಂತಾಗಿದೆ. ಕಳೆದ 2 ತಿಂಗಳಿನಿoದ ಮಳೆಯಾಗಿಲ್ಲವಾಗಿದ್ದು, ಜೋತೆಗೆ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ತೀವ್ರ ಬರ ಉಂಟಾಗಿರುವುದರಿoದ ವಾತಾವರಣದಲ್ಲಿ ಸರಾಸರಿ 1 ರಿಂದ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಇನ್ನು 1 ವಾರದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ. ಬಿಸಿಲಿನ ಬೇಗೆಯಿಂದ ತತ್ತರಿಸುವ ಜನರು ಎಳನೀರು, ಮಜ್ಜಿಗೆ ಸೇರಿದಂತೆ ತಂಪು ಪಾನಿಯ ಹಾಗೂ ಕಲ್ಲಂಗಡಿ, ಕರಬೂಜ ಇನ್ನಿತರ ಹಣ್ಣುಗಳ ಮೊರೆಹೊಗುತ್ತಿದ್ದಾರೆ. ಇನ್ನು ಅತಿಯಾದ ಬಿಸಿಲಿಗೆ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ಹಚ್ಚು ನೆರಳಿನ ವಾತಾವರಣದಲ್ಲಿ ಕೆಲಸ ಮಾಡುವುದು ಆರೋಗ್ಯಕರ.
ಇಲ್ಲದಿದ್ದಲ್ಲಿ ಪ್ರಖರವಾದ ಬಿಸಿಲು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಾರ್ಚ್ 14 ರ ವರೆಗೂ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದ್ದು, ಮಳೆ ಬರುವ ಸಾಧ್ಯತೆಗಳು ಕಂಡುಬರುತ್ತಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಕರಾವಳಿಯಲ್ಲಿ 34 ರಿಂದ 36 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಟ ಉಷ್ಣಾಂಶ ಕಂಡು ಬರುತ್ತಿದ್ದರೆ, ದಕ್ಷಿಣ ಒಳನಾಡಿನಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. 35 ರಿಂದ 37 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಂದು ತಜ್ಞರು ಅಭಿಪಟ್ಟಿದ್ದಾರೆ.
ಬ್ಯೂರೊ ರಿಪೋರ್ಟ್, ವಿಸ್ಮಯ ನ್ಯೂಸ್