ಕಾರವಾರ: ಪೌರ ಕಾರ್ಮಿಕರ ಅಭಿವೃಧ್ದಿ ಬಗ್ಗೆ ಮತ್ತು ಅವರ ಸಮಸ್ಯೆಗಳ ನಿವಾರಣೆ ಕುರಿತಂತೆ ವಿಷೇಶ ಕಾಳಜಿ ವಹಿಸುವ ಮತ್ತು ಅವರ ಸಮಸ್ಯೆಗಳಿಗೆ ಸದಾ ಸಕಾರಾತ್ಮಕವಾಗಿ ಉತ್ತರ ಕನ್ನಡ ಜಿಲಾಧಿಕಾರಿಗಳಾದ ಗಂಗುಬಾಯಿ ಮಾನ್ಕರ್ ಅವರು ಪೌರ ಕಾರ್ಮಿಕರು ತಮ್ಮ ಜೀವನದಲ್ಲಿ ಸದಾ ಸ್ಮರಿಸುವ ಮಹತ್ತರವಾದ ಕಾರ್ಯಕ್ಕೆ ಮುನ್ನಡಿ ಬರೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 127 ಮಂದಿ ಪೌರ ಕಾರ್ಮಿಕರ ವರ್ಷಗಳ ಕನಸು ನನಸಾಗಿದೆ.
ಈಗ ಕಾರ್ಯ ನಿರ್ವಹಿಸುತ್ತಿರುವ 127 ಮಂದಿ ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವ ಆದೇಶವನ್ನು ಜಿಲ್ಲಾಧಿಕಾರಿಗಳು ಹೊರಡಿಸಿದ್ದು, ಮಾರ್ಚ 11 ರಂದು ಆದೇಶ ಪತ್ರ ಕೈ ಸೇರಲಿದೆ ಎಂದು ತಿಳಿಸಿದ್ದಾರೆ. ಪೌರ ಕಾರ್ಮಿಕರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳು ಆಯ್ಕೆ ಪಟ್ಟಿ ಪ್ರಕಟಗೊಂಡ ನಂತರ ಎಲ್ಲಾ ಅಭ್ಯರ್ಥಿಗಳಿಗೂ ನೇಮಕಾತಿ ಆದೇಶ ಪತ್ರ ಪಡೆಯಲು ಅಗತ್ಯವಿದ್ದ ಸಿಂಧುತ್ವ ಪ್ರಮಾಣಪತ್ರ ದೊರೆಯುವಂತೆ ಮಾಡುವ ಮೂಲಕ ಪೌರ ಕಾರ್ಮಿಕರ ಕುಟುಂಬಗಳಲ್ಲಿ ಸಂತಸ ಮೂಡುವಂತೆ ಮಾಡಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ