ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಇಲಾಖೆ, ಹೊಸ ನೇಮಕಾತಿ (Bank Recruitment) ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 93 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ (bank job vacancy ) ನೇಮಕಾತಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂಪಾಯಿ 28,425 ರಿಂದ 87,125 ಸಾವಿರ ರೂಪಾಯಿ ನಿಗದಿಯಾಗಿದೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ: 64 ಹುದ್ದೆಗಳ ನೇಮಕಾತಿ: 47 ಸಾವಿರ ಮಾಸಿಕ ವೇತನ: ಪಿಯುಸಿ, ಡಿಪ್ಲೋಮಾ, ಐಟಿಐ ಪಾಸ್ ಆದವರು Apply ಮಾಡಿ
ಅಧಿಸೂಚನೆಯ ( Bank Recruitment ) ಮಾಹಿತಿಯಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ( bank job vacancy) ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೆಗೆದುಕೊಂಡ ಅಂಕಗಳ ಅರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ 1 : 5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಯಲಿದೆ.
ಇಲಾಖೆ | ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ |
ಒಟ್ಟು ನೇಮಕಾತಿ | 93 |
ಹುದ್ದೆಯ ಹೆಸರು | ಬ್ಯಾಂಕ್ ಸಹಾಯಕರು |
ಅರ್ಜಿ ಸಲ್ಲಿಸುವ ವಿಧಾನ | Online |
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡ 85ಕ್ಕೆ ಲೆಕ್ಕಾಚಾರ ಮಾಡಲಾಗುವುದು ಮತ್ತು ಮೌಖಿಕ ಸಂದರ್ಶನಕ್ಕೆ 15 ಅಂಕಗಳನ್ನು ನಿಗದಿ ಪಡಿಸಲಾಗುವುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್ 6, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿದ್ದರೆ ಉತ್ತಮ, ಅಲ್ಲದೆ, ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಹಾಗು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 55 ರಷ್ಟು ಅಂಕದೊoದಿಗೆ ಪಾಸ್ ಆಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಡಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊoದಿಗೆ ಉತ್ತೀರ್ಣರಾಗಿರಬೇಕಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಆನ್‌ನೈಲ್‌ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲ ಸೂಚನೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಎಲ್ಲಾ ಷರತ್ತುಗಳನ್ನು ಪೂರೈಸಿರುತ್ತಾರೆ ಎಂದಲ್ಲ. ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆಗೆ ಒಳಪಡಿಸಲಾಗುವುದು. ನ್ಯೂನತೆಗಳು ಅಥವಾ ದೋಷಗಳು ಕಂಡುಬoದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ. ಅಭ್ಯರ್ಥಿಗಳಿಗೆ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಬಗ್ಗೆ ಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲಿಸಲು ಕೊನೆಯ ದಿನಾಂಕ | ಏಪ್ರಿಲ್ 6, 2024 |
ಮಾಸಿಕ ಆರಂಭಿಕ ವೇತನ | 28,425 ರಿಂದ 87,125 ಸಾವಿರ ರೂಪಾಯಿ |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್