Important
Trending

ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿ: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ

ಕುತೂಹಲದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26 ಕ್ಕೆ ಮೊದಲ ಮತ್ತು ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗ ಈ ಕುರಿತು ಮಾಹಿತಿ ನೀಡಿದ್ದು, ದೇಶಾದ್ಯಂತ ಇಂದಿನಿoದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.
ದೇಶದಲ್ಲಿ 7 ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19 ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಹಾಗು ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್ 26ರಂದು ಮತದಾನ ನಡೆಯುವ ಕ್ಷೇತ್ರಗಳು

ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)
ಹಾಸನ (ಸಾಮಾನ್ಯ)
ದಕ್ಷಿಣ ಕನ್ನಡ (ಸಾಮಾನ್ಯ)
ಮೈಸೂರು-ಕೊಡಗು (ಸಾಮಾನ್ಯ)
ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
ತುಮಕೂರು (ಸಾಮಾನ್ಯ)
ಮಂಡ್ಯ (ಸಾಮಾನ್ಯ)
ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
ಬೆಂಗಳೂರು ಉತ್ತರ (ಸಾಮಾನ್ಯ)
ಬೆಂಗಳೂರು ದಕ್ಷಿಣ (ಸಾಮಾನ್ಯ)
ಬೆಂಗಳೂರು ಕೇಂದ್ರ (ಸಾಮಾನ್ಯ)
ಕೋಲಾರ (ಪರಿಶಿಷ್ಟ ಜಾತಿ ಮೀಸಲು)
ಚಿಕ್ಕಬಳ್ಳಾಪುರ (ಸಾಮಾನ್ಯ)

ಮೇ 7 ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಬೆಳಗಾವಿ (ಸಾಮಾನ್ಯ)
ಬಾಗಲಕೋಟೆ (ಸಾಮಾನ್ಯ)
ಚಿಕ್ಕೋಡಿ (ಸಾಮಾನ್ಯ)
ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
ಬೀದರ್ (ಸಾಮಾನ್ಯ)
ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
ಕೊಪ್ಪಳ (ಸಾಮಾನ್ಯ)
ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
ಹಾವೇರಿ (ಸಾಮಾನ್ಯ)
ಶಿವಮೊಗ್ಗ (ಸಾಮಾನ್ಯ)
ಧಾರವಾಡ (ಸಾಮಾನ್ಯ)
ಉತ್ತರ ಕನ್ನಡ (ಸಾಮಾನ್ಯ)
ದಾವಣಗೆರೆ (ಸಾಮಾನ್ಯ)

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button