ಹಾಲಿ ಸಂಸದ ಅನಂತ್‌ ಕುಮಾರ್ ಹೆಗಡೆಗೆ ನಿರಾಸೆ: ತಪ್ಪಿದ ಉತ್ತರಕನ್ನಡದ ಟಿಕೆಟ್

ಕಾರವಾರ: ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಶಾಸಕ, ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಒಲಿದಿದೆ.

ಇದರೊಂದಿಗೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಮುಂದಿನ ನಡೆ ಈಗ ನಿಗೂಢವಾಗಿದೆ. ಅವರ ಬೆಂಬಲಿಗರು ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version