Important
Trending

27 ರ ಬುಧವಾರ ಅಂಕೋಲಾದಲ್ಲಿ ಡಾ.ಅಂಜಲಿ ನಿಂಬಾಳ್ಕರ ಸಭೆ : ಪಕ್ಷದ ಹಿರಿಕಿರಿಯ ಮುಖಂಡರು, ಕಾರ್ಯಕರ್ತರ ಜೊತೆ ಸಮಾಲೋಚನೆ

ಅಂಕೋಲಾ: ಬರಲಿರುವ ಲೋಕಾ ಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಡಾ.ಅಂಜಲಿ ನಿಂಬಾಳ್ಕರ್, ಮಾರ್ಚ್ 27 ಬುಧವಾರ ತಾಲೂಕಿಗೆ ಭೇಟಿ ನೀಡಲಿದ್ದು,ಮದ್ಯಾಹ್ನ 3 ಗಂಟೆಗೆ ಪಟ್ಟಣದ ನಾಡವರ ಸಭಾಭವನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸಂದರ್ಭದಲ್ಲಿ ಎ.ಐ.ಸಿ.ಸಿ ಕಾರ್ಯದರ್ಶಿಗಳಾದ ಮಯೂರ ಜಯಕುಮಾರ,ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಹಾಲಿ ಶಾಸಕರಾದ ಆರ್. ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಐವಾನ್ ಡಿಸೋಜ, ಪ್ರಧಾನ ಕಾರ್ಯದರ್ಶಿಗಳಾದ ನಿವೇದಿತ್ ಆಳ್ವ, ಶಾಸಕರಾದ ಸತೀಶ ಸೈಲ್, ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಯಿ ಗಾಂವಕರ ಸೇರಿದಂತೆ ಪಕ್ಷದ ಇತರ ನಾಯಕರು ಉಪಸ್ಥಿತರಿರಲಿದ್ದಾರೆ.

ಈ ಸಭೆಯಲ್ಲಿ ಅಂಕೋಲಾ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಕ್ಷದ ಪದಾಧಿಕಾರಿಗಳು, ಮುಖಂಡರು, ಎಲ್ಲಾ ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಾಲೂಕಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಾಂಡುರಂಗ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button