ಬೈಕಿಗೆ ಡಿಕ್ಕಿಹೊಡೆದ ಕಾರು: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿರಸಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಹನುಮಂತಿಯಲ್ಲಿ ನಡೆದಿದೆ. ತಾಲೂಕಿನ ಮಂಜಗುಣಿ ಕಲ್ಲಳ್ಳಿಯ ಶ್ಯಾಮಸುಂದರ ವಿರೂಪಾಕ್ಷ ಹೆಗಡೆ ಮೃತ ಬೈಕ್ ಸವಾರ. ಕುಮಟಾ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಬೈಕ್‌ಗೆ ಎದುರುಗಡೆಯಿಂದ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕಿಗೆ ಡಿಕ್ಕಿಹೊಡೆದ ಕಾರು ರಸ್ತೆ ಬದಿಯಲ್ಲಿದ್ದ ಬೃಹತ್ ಜಾಹೀರಾತು ಫಲಕಕ್ಕೆ ಬಡಿದು ತಗ್ಗಿಗೆ ಪಲ್ಟಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪಿ.ಎಸ್.ಐ ಮಹೇಶ ಪ್ರಸಾದ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version