ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗೆ ದನಿಯಾಗುವ ನಿಟ್ಟಿನಲ್ಲಿ ಕಿರುಚಿತ್ರ ನಿರ್ಮಾಣ: ಜಿಲ್ಲೆಯ ಯುವಕನಿಂದ ವಿಶೇಷ ಪ್ರಯತ್ನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ಮಲ್ಟಿ ಸ್ಪೆಚಾಲಿಟಿ ಆಸ್ಪತ್ರೆ ನಿರ್ಮಾಣದ ಕೂಗು ಇಂದಿಗೂ ಕೂಗಾಗಿಯೇ ಉಳಿದುಕೊಂಡಿದೆ. ಈ ಬಗ್ಗೆ ಅದೆಷ್ಟೋ ಪ್ರತಿಭಟನೆಗಳು ನಡೆದು, ಅದೆಷ್ಟೋ ಅಭಿಯಾನಳು ನಡೆದರೂ ಕೂಡ ಆಸ್ಪತ್ರೆ ನಿರ್ಮಾಣ ಕಾರ್ಯ ಮಾತ್ರ ಕನಸಾಗಿಯೇ ಉಳಿದಿದೆ. ಹೀಗಿರುವಾಗ ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗೆ ದನಿಯಾಗುವ ನಿಟ್ಟಿನಲ್ಲಿ ವಾಯ್ಸ್ ಆಫ್ ಉತ್ತರ ಕನ್ನಡ ಹೆಸರಿನ ಶಾರ್ಟ್ ಫಿಲ್ಮ್ ಉತ್ತರ ಕನ್ನಡದ ಎಮರ್ಜೆನ್ಸಿ ಹಾಸ್ಪಿಟಲ್ ಅಗತ್ಯವನ್ನು ಒತ್ತಿ ಹೇಳುವ ಚಿತ್ರ, ಬೆಂಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಆಕಾಶ್ ಗುಲಾಬಿ ಮೂಲತಃ ಹೊನ್ನಾವರದವರು. ತಮ್ಮೂರಿಗೆ ಎಮರ್ಜೆನ್ಸಿ ಆಸ್ಪತ್ರೆಯ ಅಗತ್ಯವನ್ನು ಕಂಡ ಇವರು ಕಥೆ, ಸಂಭಾಷಣೆ, ಚಿತ್ರಕತೆ, ನಿರ್ದೇಶನ ಮಾಡಿ ಈ ಕಿರುಚಿತ್ರವನ್ನು ಮಾಡಿದ್ದಾರೆ. ಅದ್ವೆöÊತ ಸ್ಟುಡಿಯೋ ಪ್ರೊಡಕ್ಷನ್‌ನಲ್ಲಿ ನಿರ್ಮಾಣವಾಗಿರುವ ವಾಯ್ಸ್ ಆಫ್ ಉತ್ತರ ಕನ್ನಡ ಶಾರ್ಟ್ ಫಿಲ್ಮ ಟೀಸರ್ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಇನ್ನು ಜಿಲ್ಲೆಯ ಜನತೆಯ ಕೂಗನ್ನು ಸಾರುವ ಈ ಕಿರುಚಿತ್ರ ಏಪ್ರಿಲ್ 9 ರಂದು ಬಿಡುಗಡೆಯಾಗಲಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version