Info
Trending

ಶಿರಸಿ ಸಹಾಯಕ ಆಯುಕ್ತ ಹುದ್ದೆಗೆ ಆಕೃತಿ ಬನ್ಸಾಲ್ ನೇಮಕ

ಶಿರಸಿ: ಕರೊನಾ ಸಂಕಷ್ಟದ ಕಾಲದಲ್ಲಿ ಅತ್ಯಂತ ತ್ವರಿತವಾಗಿ ಸ್ಪಂದಿಸಿ ಜನಮೆಚ್ಚುಗೆಗೆ ಪಾತ್ರವಾಗಿದ್ದ ಡಾ. ಈಶ್ವರ ಉಳ್ಳಾಗಡ್ಡಿ ಅವರ ವರ್ಗಾವಣೆಯಿಂದ ತೆರವಾದ ಸಹಾಯಕ ಆಯುಕ್ತ ಹುದ್ದೆಗೆ ಆಕೃತಿ ಬನ್ಸಾಲ್ ನೇಮಕಗೊಂಡಿದ್ದಾರೆ ಎನ್ನಲಾಗಿದೆ.

2017 ಬ್ಯಾಚಿನ್ IAS ಅಧಿಕಾರಿ, UPSC ಪರೀಕ್ಷೆಯ All India Rankingನಲ್ಲಿ 52ನೇ ಸ್ಥಾನ ಗಳಿಸಿ ಸಾಧನೆಗೈದಿದ್ದ ಆಕೃತಿ ಬನ್ಸಾಲ್ ಅಧಿಕಾರ ವಹಿಸಿಕೊಳ್ಳುವಂತೆ ಸರಕಾರದ ಇಲಾಖೆ ಆದೇಶ ಹೊರಡಿಸಿದೆ ಎಂಬ ಮಾಹಿತಿ ಬಂದಿದೆ.


ಡಾ. ಉಳ್ಳಾಗಡ್ಡಿ ಸಹಾಯಕ ಆಯುಕ್ತರಾಗಿ ನಿಯೋಜನೆಗೊಂಡು ತಮ್ಮ ಕಾರ್ಯಾವಧಿಯಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದರು.

ವಿಸ್ಮಯ ನ್ಯೂಸ್, ಶಿರಸಿ

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ
ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568

Related Articles

Back to top button