Village Accountant Recruitment 2024: ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಖಾಲಿಯಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ ಆದವರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400 ರೂಪಾಯಿಯಿಂದ 42,000 ಸಾವಿರ ವೇತನ ಶ್ರೇಣಿ ನಿಗದಿಯಾಗಿದೆ. ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: PDO Recruitment 2024: ಪಿಡಿಓ ನೇಮಕಾತಿ: 70 ಸಾವಿರದ ವರೆಗೆ ಮಾಸಿಕ ವೇತನ: Apply Now
Village Accountant Recruitment 2024: ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, 04 ಮೇ 2024, ಅರ್ಜಿ ಸಲಿಸಲು ಕೊನೆಯ ದಿನವಾಗಿದೆ. ಅಧಿಸೂಚನೆಯ ಮಾಹಿತಿ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ 40 ವರ್ಷ ನಿಗದಿಯಾಗಿದೆ. ಪ.ಜಾತಿ/ಪ.ಪಂ/ಪ್ರ1/ ಅಭ್ಯರ್ಥಿಗಳು ರೂ. 500 ರೂಪಾಯಿ, 2ಎ,2ಬಿ,3ಎ,3ಬಿ, ಅಭ್ಯರ್ಥಿಗಳು ರೂ. 750 ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300 ಅರ್ಜಿ ಶುಲ್ಕ ನಿಗದಿಯಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ | ಕರ್ನಾಟಕದ ಕಂದಾಯ ಇಲಾಖೆ |
ಒಟ್ಟು ಹುದ್ದೆಗಳು | 1 ಸಾವಿರ |
ವೇತನ | 21,400 ರೂಪಾಯಿಯಿಂದ 42,000 ಸಾವಿರ |
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | 04 ಮೇ 2024 |
ಅಧಿಸೂಚನೆಯ ಪ್ರಕಾರ ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಹಾಗು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ನಿದಿಯಾಗಿದೆ. ಅಭ್ಯರ್ಥಿಗಳು ನೇಮಕಾತಿ ಬಯಸಿ ಯಾವುದಾದರು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಿದೆ.
ವಿದ್ಯಾರ್ಹತೆ | PUC, ITI, DIPLOMA |
ಅರ್ಜಿ ಸಲ್ಲಿಕೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆ | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್