Important
Trending

ಬಟ್ಟೆ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿಹೊಡೆದ ಸ್ಕೂಟರ್ : ಬಾಲಕಿ ಸಾವು

ಕುಮಟಾ: ತಂದೆ, ಮಕ್ಕಳಿಬ್ಬರು ಬಟ್ಟೆ ಖರೀದಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿರುವಾಗ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ಮಿರ್ಜಾನ್‌ನಲ್ಲಿ ನಡೆದಿದೆ. ತಂದೆ ಮತ್ತು ಇಬ್ಬರು ಮಕ್ಕಳು ಸ್ಕೂಟರ್‌ನಲ್ಲಿ ಸಾಗುತ್ತಿರುವಾಗ ಸವಾರನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಸ್ಕೂಟರ್ ಗುದ್ದಿಕೊಂಡು ಭೀಕರ ಅಪಘಾತವಾಗಿದೆ.

ಈ ಅಪಘಾತದಲ್ಲಿ ಬೆಟ್ಕುಳಿ ನಿವಾಸಿಯಾದ ಇಸಾಕ್ ಶೇಖ್ (40), ಆತನ ಮಕ್ಕಳಾದ ಸನಾ ಶೇಖ್ (13) ಮತ್ತು ಸಿಮ್ರಾನ್ ಶೇಖ್ (12) ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರ ನೆರವಿನಲ್ಲಿ ಮೂವರು ಗಾಯಾಳುಗಳನ್ನು ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಭೀರ ಗಾಯಗೊಂಡ ಸನಾ ಶೇಖ್ ಎಂಬ ಬಾಲಕಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಸುನೀಗಿದ್ದಾಳೆ. ಗಂಭೀರ ಗಾಯಗೊಂಡ ಇಸಾಕ್ ಶೇಖ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸಿಮ್ರಾನ್ ಶೇಖ್ ಕೈ ಪ್ರಾಕ್ಚರ್ ಆಗಿದ್ದರಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿ ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ

Back to top button