Important
Trending

ಗ್ಯಾಸ್ ಸಿಲೆಂಡರ್ ಸ್ಫೋಟ: ಇಬ್ಬರ ದುರ್ಮರಣ

ಹೊನ್ನಾವರ: ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿ ಆದ ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿ ಆಗದೆ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಹೊನ್ನಾವರ ತಾಲೂಕಿನ ಹಳದೀಪುರ ಗ್ರಾಮದ ಗಜನಿ ಹಿತ್ತಲದ ನಿವಾಸಿ ಶನಿಯಾರ ಗೌಡ (42) ಇವರ ಅಡುಗೆ ಮನೆಯಲ್ಲಿ ಉಪಯೋಗಿಸುತ್ತಿದ್ದ ಗ್ಯಾಸ್ ಸಿಲೆಂಡರ್‌ನಿಂದ ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿ, ಸಿಲಿಂಡರ್ ಸ್ಪೋಟಗೊಂಡಿತ್ತು.

ಇಲ್ಲಿದೆ ಉದ್ಯೋಗಾವಕಾಶ: ಇದನ್ನೂ ಓದಿ: RPF Recruitment 2024: 4208 ಹುದ್ದೆಗಳಿಗೆ ನೇಮಕಾತಿ: SSLC ಆದವರು Apply ಮಾಡಿ

ಈ ಬೆಂಕಿ ಅವಘಡದಲ್ಲಿ ಶನಿಯಾರ ಗೌಡ ಮತ್ತು ಹಳದೀಪುರ ನಿವಾಸಿ ಕೃಷ್ಣ ನಾರಾಯಣ ಗೌಡ (40) ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹೊನ್ನಾವರ ತಾಲೂಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಫಲಕಾರಿ ಆಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button