ಮನೆಪಕ್ಕದ ಕಾಡಿನಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ

ಸಿದ್ದಾಪುರ: ನವಜಾತ ಗಂಡು ಶಿಶುವಿನ ಮೃತದೇಹ ತಾಲೂಕಿನಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ತಾಲೂಕಿನ ಬಿಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳೂರಿನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹೆತ್ತ ತಾಯಿಗೆ ಮಗು ಬೇಡವಾದರೆ, ಅನಾಥಾಶ್ರಮಕ್ಕೆ ಕೊಡಬಹುದುತ್ತು. ಅದರ ಬದಲು ಈ ರೀತಿಯ ಅಮಾನವೀಯ ಕೃತ್ಯ ಎಸಗಿದ್ದು ಅಕ್ಷಮ್ಯ ಅಪರಾದ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದು, ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವoತೆ ಆಗ್ರಹಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Exit mobile version