Join Our

WhatsApp Group
Important
Trending

ವಿವಾಹಿತ ಮಹಿಳೆಗೆ ಪ್ರೀತಿಸು ಎಂದು ಕಿರುಕುಳ: ಆರೋಪಿಯ ಬಂಧನ

ಶಿರಸಿ; ವಿವಾಹಿತ ಮಹಿಳೆಯೋರ್ವಳಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಘವೇಂದ್ರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ ಹಲವು ತಿಂಗಳುಗಳಿoದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿವಾಹಿತ ಮಹಿಳೆಯೋರ್ವಳಿಗೆ ನಿನ್ನನ್ನು ಪ್ರೀತಿಸುತ್ತೆನೆ ಎಂದು ಪೀಡಿಸಿ, ಆಕೆ ಜೊತೆ ಅಸಭ್ಯವಾಗಿ ವರ್ತಿಸಿದ್ದ ಹಿನ್ನೆಲೆಯಲ್ಲಿ ಆ ಮಹಿಳೆ ದೂರು ದಾಖಲಿಸಿದ್ದಳು.

ಇದನ್ನೂ ಓದಿ: RPF Recruitment 2024: 4208 ಹುದ್ದೆಗಳಿಗೆ ನೇಮಕಾತಿ: SSLC ಆದವರು Apply ಮಾಡಿ

ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಈ ಕುರಿತು ವಿಚಾರಣೆ ನಡೆಸಿ ಆರೋಪಿತ ರಾಘವೇಂದ್ರ ಆಚಾರ್ಯನನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿತನಿಗೆ 15 ದಿನಗಳ ಕಾಲ ನ್ಯಾಯಂಗ ಬಂಧನವನ್ನು ನೀಡಿದೆ. ಗ್ರಾಮೀಣ ಠಾಣೆ ಪಿ.ಎಸ್.ಐ ಪ್ರತಾಪ್ ಪ್ರಕರಣ ದಾಖಲಿಸಿಕೊಂಡು ತನಿಖಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Back to top button