Follow Us On

WhatsApp Group
Important
Trending

Manjuguni Venkataramana Temple: ವೆಂಕಟರಮಣ ದೇವರ ರಥೋತ್ಸವ

ಶಿರಸಿ: ಕರ್ನಾಟಕದ ತಿರುಪತಿ ಎಂದೇ ಖ್ಯಾತಿ ಪಡೆದ ತಾಲೂಕಿನ ಮಂಜುಗುಣಿಯ ಶ್ರೀ ವೆಂಕಟರಮಣ ದೇವರ ರಥೋತ್ಸವವು ಸಡಗರ ಸಂಭ್ರಮದಿoದ ನಡೆಯಿತು. ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಸಲಾಯಿತು.ಬಳಿಕ ಸಿಂಗಾರಗೊoಡ ಮಹಾರಥದಲ್ಲಿ ವೆಂಕಟರಮಣ ದೇವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.

ಮಹಾರಥದಲ್ಲಿ ವಿರಾಜಮಾನವಾಗಿ ಕುಳಿತ ಶ್ರೀ ದೇವರನ್ನು ಲಕ್ಷಾಂತರ ಭಕ್ತರು ದರ್ಶನ ಪಡೆದು ಪುನೀತರಾದರು. ನೆರೆದಿದ್ದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗೋವಿಂದ ಗೋವಿಂದ ಎಂಬ ನಾಮಸ್ಮರಣೆ ಯೊಂದಿಗೆ ರಥೋತ್ಸವವನ್ನು ನಡೆಸಲಾಯಿತು.

ವಿಸ್ಮಯ ನ್ಯೂಸ್, ಶಿರಸಿ

Back to top button