ಹೊನ್ನಾವರ: ತಾಲೂಕಿನ ಮಂಕಿ ಗುಳದಕೇರಿಯ ಭವಾನಿ ಕಾಂಪ್ಲೆಕ್ಸ್ ನಲ್ಲಿರುವ ಕಾಮಾಕ್ಷಿ ಜ್ಯೂವೆಲರ್ ಚಿನ್ನದ ಅಂಗಡಿ ಶಟರ್ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಘಟನೆ ನಡೆದಿದೆ. ಗುಳದಕೇರಿ ಅಣ್ಣಪ್ಪ ಪ್ರಭಾಕರ್ ಶೇಟ್ ಎಂಬುವವರಿಗೆ ಸೇರಿದ ಚಿನ್ನದ ಅಂಗಡಿ ಕಳ್ಳತನವಾಗಿದೆ. ಬಲವಾದ ವಸ್ತುವಿನಿಂದ ಶಟರ್ ಎತ್ತಿ ಅಂಗಡಿ ಒಳನುಗ್ಗಿದ ಕಳ್ಳರು ಕಳ್ಳತನ ನಡೆಸಿದ್ದಾರೆ.
ಅಂದಾಜು 14 ಲಕ್ಷ 55 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ 22.50 ಕೆ.ಜಿ ತೂಕದ 11 ಲಕ್ಷ 10 ಸಾವಿರ ಮೌಲ್ಯದ ಬೆಳ್ಳಿಯ ಆಭರಣ, ವಸ್ತುಗಳನ್ನು ಕದ್ದೊಯ್ದಿದ್ದಾರೆ. ಈ ಕುರಿತು ಅಣ್ಣಪ್ಪ ಪ್ರಭಾಕರ ಶೇಟ್ ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ