Follow Us On

Google News
Important
Trending

ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ

ಹೊನ್ನಾವರ : ತುಮಕೂರುನಿಂದ ಮುರುಡೇಶ್ವರ ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಹೊನ್ನಾವರ ತಾಲೂಕಿನ ಗೇರುಸೋಪ್ಪಾ ಸುಳೆಮಕ್ಕಿ ಕ್ರಾಸ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಆರು ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿದ್ದು, ಇನ್ನುಳುದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಬಸ್ಸಿನಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೆಲ್ಲರೂ ಗೌರಿಬಿದನೂರು ತಾಲ್ಲೂಕಿನವರು ಎಂದು ತಿಳಿದುಬಂದಿದೆ. ಹೊನ್ನಾವರ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರ ಇನ್ನಿತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button