Follow Us On

WhatsApp Group
Job News
Trending

Revenue Department Recruitment: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ: 21 ರಿಂದ 42 ಸಾವಿರ ವೇತನ: ಪಿಯುಸಿ ಆದವರು ಅರ್ಜಿ ಸಲ್ಲಿಸಿ

ಮೇ 15 , 2024ರ ವರೆಗೆ ಅರ್ಜಿ ಸಲ್ಲಿಕೆ‌‌ ದಿನಾಂಕ ವಿಸ್ತರಣೆ

Revenue Department Recruitment ರಾಜ್ಯ ಕಂದಾಯ ಇಲಾಖೆಯಲ್ಲಿ ಒಟ್ಟು 1 ಸಾವಿರ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400 ರೂಪಾಯಿಯಿಂದ 42 ಸಾವಿರ ರೂಪಾಯಿ ವೇತನ ಶ್ರೇಣಿಯಲ್ಲಿ ವೇತನ ಶ್ರೇಣಿ ನಿಗದಿಯಾಗಿದೆ. ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಚಿನ್ನದ ಗಣಿಯಲ್ಲಿ 168 ಹುದ್ದೆಗಳಿಗೆ ನೇಮಕಾತಿ: ಐಟಿಐ, ಡಿಪ್ಲೋಮಾ, ಪದವಿ ಆದವರು ಅರ್ಜಿ ಸಲ್ಲಿಸಿ: 48 ಸಾವಿರ ಮಾಸಿಕ ವೇತನ

Revenue Department Recruitment ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ.‌ಈ ಮೊದಲು, ಮೇ 5, 2024 ರಿಂದ ಅರ್ಜಿ ಸಲ್ಲಿಕೆ ಕೊನೆಯ ದಿನ ಎಂದು ಮಾಹಿತಿ ನೀಡಲಾಗಿತ್ತು.. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇಲಾಖೆಕಂದಾಯ ಇಲಾಖೆ
ಹುದ್ದೆಗ್ರಾಮ ಲೆಕ್ಕಾಧಿಕಾರಿ
ಒಟ್ಟು ನೇಮಕಾತಿ ಹುದ್ದೆಗಳು1 ಸಾವಿರ
ವಿದ್ಯಾರ್ಹತೆPUC

ಅಧಿಸೂಚನೆಯ ಮಾಹಿತಿ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕಿದೆ. ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಯಾಗಿದೆ. ಅಲ್ಲದೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಪ್ರಾರಂಭಏಪ್ರಿಲ್ 05, 2024
ಅರ್ಜಿ ಸಲ್ಲಿಕೆ ಕೊನೆಯ ದಿನಮೇ 15, 2024
ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button