Important
Trending

SSLC Result: ಫಲಿತಾಂಶ ನೋಡುವುದು & ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ

ಮನೆಯಲ್ಲಿಯೇ ಕುಳಿತು ವಿದ್ಯಾರ್ಥಿಗಳು, ಪಾಲಕರು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಿಸಬಹುದಾಗಿದೆ

2023-24 SSLC ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟವಾಗಿದೆ.. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಿದೆ. ಮನೆಯಲ್ಲಿಯೇ ಕುಳಿತು ವಿದ್ಯಾರ್ಥಿಗಳು, ಪಾಲಕರು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಈ ಕೆಳಗಡೆ ಅಧಿಕೃತ ವೆಬ್‌ಸೈಟಿನ ಲಿಂಕ್ ನೀಡಲಾಗಿದೆ. ಆಸಕ್ತರು ಭೇಟಿ ನೀಡಿ, ಫಲಿತಾಂಶವನ್ನು ವೀಕ್ಷಿಸಬಹುದು.

ಉಡುಪಿ ಪ್ರಥಮ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಹಾಗು ಶಿವಮೊಗ್ಗ ಮೂರನೇ ಸ್ಥಾನದಲ್ಲಿದೆ. ಶೇಕಡಾ 84.54 ರಷ್ಟು ಫಲಿತಾಂಶದೊoದಿಗೆ ಉತ್ತರಕನ್ನಡ ಜಿಲ್ಲೆ ಐದನೇ ಸ್ಥಾನದಲ್ಲಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಶೇಕಡಾ 94 ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಪ್ರಥಮ ಸ್ಥಾನ ಪಡೆದಿದ್ದು 625ಕ್ಕೆ 625 ಅಂಕ ಪಡೆದಿದ್ದಾಳೆ. ಹಾಗೆಯೇ 624 ಅಂಕಗಳನ್ನು 7 ವಿದ್ಯಾರ್ಥಿಗಳು, 623 ಅಂಕಗಳನ್ನು 14 ವಿದ್ಯಾರ್ಥಿಗಳು ಪಡೆದಿದ್ದಾರೆ. 2023-24 ರ ಫಲಿತಾಂಶ ಪ್ರಮಾಣ ಶೇ 73.40 ಆಗಿದ್ದು, ಕಳೆದ ಬಾರಿಗಿಂತ ಶೇ 10ರಷ್ಟು ಕಡಿಮೆ ಆಗಿದೆ. ಕಳೆದ ವರ್ಷ ಶೇ 83.89ರಷ್ಟು ಫಲಿತಾಂಶ ದಾಖಲಾಗಿತ್ತು.

ಇದನ್ನೂ ಓದಿ: ಇತ್ತಿಚಿನ ಸರ್ಕಾರಿ ಮತ್ತು ಖಾಸಗಿ ಉದ್ಯೋಗಾವಕಾಶ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಿಸಲ್ಟ್ ನೋಡೋದು ಹೇಗೆ? ಇಲಾಖೆಯ ಅಧಿಕೃತ ವೆಬ್ ಸೈಟ್‌ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಬಹುದು. ಅಲ್ಲದೆ, (SSLC Result) ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಾಹಿತಿ ನೀಡಿದೆ.

ಅಧಿಕೃತ ವೆಬ್ ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಫಲಿತಾಂಶ ನೋಡಲುಇಲ್ಲಿ ಕ್ಲಿಕ್ ಮಾಡಿ

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button