Cochin Shipyard Recruitment 2024: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ಅಧಿಸೂಚನೆಯಂತೆ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 07 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕಿದೆ. ಹುದ್ದೆಗಳಿಗೆ ಅನುಗುಣವಾಗಿ 20 ಸಾವಿರದಿಂದ 21 ಸಾವಿರದ ವರೆಗೆ ಮಾಸಿಕ ವೇತನ ನಿಗದಿಯಾಗಿದೆ.
ಇದನ್ನೂ ಓದಿ: ಇಲ್ಲಿದೆ ಉದ್ಯೋಗಾವಕಾಶ: ಪಿಡಿಓ ನೇಮಕಾತಿ: 70 ಸಾವಿರದ ವರೆಗೆ ಮಾಸಿಕ ವೇತನ: Apply Now
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿಯಾಗಿದೆ. ಅಲ್ಲದೆ, ಗರಿಷ್ಠ ವರ್ಷ 30 ವಯೋಮಿತಿಯನ್ನು ಮೀರಿರಬಾರದು ಎಂಬ ಷರತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗು ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಒಟ್ಟು ಹುದ್ದೆಗಳು | 15 |
ಹುದ್ದೆಗಳ ಹೆಸರು | ಜನರಲ್ ವರ್ಕರ್ |
ಅರ್ಜಿ ಸಲ್ಲಿಸುವ ವಿಧಾನ | Online |
ವಿದ್ಯಾರ್ಹತೆ | 7th |
Cochin Shipyard Recruitment 2024: ಒಟ್ಟು 15 ಜನರಲ್ ವರ್ಕರ್ಹುದ್ದೆಗಳು ಖಾಲಿಯಿವೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮೇ, 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯತಿ ನೀಡಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು, ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು, ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನ | ಮೇ, 22, 2024 |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಭಾರತದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಲಯದ ಕಂಪನಿಗಳಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕೂಡಾ ಒಂದಾಗಿದೆ. ಇದು ಭಾರತದಲ್ಲಿ ಅತಿದೊಡ್ಡ ಹಡಗುಗಳ ನಿರ್ಮಾಣಕ್ಕೆ ಹೆಸರುವಾಸಿಯಾಗಿದೆ. ದೇಶದಲ್ಲಿ ಮತ್ತು ಟ್ಯಾಂಕರ್‌ಗಳು, ಗಸ್ತು ಹಡಗುಗಳು, ಪ್ರಯಾಣಿಕ ಹಡಗುಗಳು , ಬೃಹತ್ ವಾಹಕಗಳು, ಟಗ್‌ಗಳನ್ನು ನಿರ್ಮಿಸುವಲ್ಲಿ ಪರಿಣಿತಿ ಪಡೆದಿದ್ದು, ದೇಶದ ಗಮನ ಸೆಳೆದಿದೆ. ಪ್ರಧಾನ ಕಚೇರಿಯ ವಿಳಾಸ: ಆಡಳಿತಾತ್ಮಕ ಕಟ್ಟಡ, ಕೊಚ್ಚಿನ್ ಶಿಪ್‌ಯಾರ್ಡ್ ಆವರಣ, ಪೆರುಮಾನೂರ್, ಕೊಚ್ಚಿ, ಕೇರಳ, 682015
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಹೆಚ್ಚಿನ ಮಾಹಿತಿಗಾಗಿ ಮೇಲ್ ಮೂಲಕವೂ ಸಂಪರ್ಕಿಸಬಹುದಾಗಿದೆ: e-mail career@cochinshipyard.in .
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್