ಅಂಕೋಲಾ: ಕನ್ನಡ ಸಾಹಿತ್ಯ ಪರಿಷತ್ತು ಅಂಕೋಲಾ ಘಟಕ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೂಜಗೇರಿಯ ಕನ್ನಡ ವಿಭಾಗ ಮತ್ತು ಆಯ್.ಕ್ಯು.ಎ.ಸಿ ಇವರ ಸಂಯುಕ್ತ ಆಶ್ರಯದಲ್ಲಿ ವಸಂತ ಕಾವ್ಯ ಸಂಭ್ರಮ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಮೇ 18 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದು ಕಾಲೇಜಿನ ಪ್ರಾಚಾರ್ಯೆ ಡಾ.ಶಾರದಾ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ.
ತಾಲೂಕಿನ ಹಿರಿ ಕಿರಿಯ ಸಾಹಿತಿ, ಕವಿಗಳಿಂದ ಕವನ ವಾಚನ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಬರಹಗಾರ ಉದಯಕುಮಾರ ಹಬ್ಬು ಅವರ ಓದಿನ ಮನೆ ಮತ್ತು ಹೊಸ ಓದು ಹೊಸ ನೋಟ ಪುಸ್ತಕಗಳ ಬಿಡುಗಡೆ ಆಗಲಿದ್ದು ಹಿರಿಯ ಕಥೆಗಾರ ಡಾ.ರಾಮಕೃಷ್ಣ ಜಿ ಗುಂದಿ, ಕವಿ ಫಾಲ್ಗುಣ ಗೌಡ ಕೃತಿಗಳನ್ನು ಪರಿಚಯಿಸಲಿದ್ದಾರೆ. ಸರ್ವರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಸಂಘಟಕರು ಕೋರಿದ್ದಾರೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ