Follow Us On

WhatsApp Group
Important
Trending

ಕ್ರಿಕೆಟ್ ಆಟ ಆಡುವ ವೇಳೆ ಸಿಡಿಲು ಬಡಿದು ಯುವಕ ಸಾವು

ಬನವಾಸಿ: ಸಿಡಿಲು ಬಡಿದು ವಿದ್ಯಾರ್ಥಿಯೊಬ್ಬ ಸಾವು ಕಂಡ ಘಟನೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ. ಶಹಿದ್ ಶೇಖ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಬನವಾಸಿಯ ಕದಂಬ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಸಿಡಿಲಿಗೆ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತು, ಆದರೆ ದುರಾದೃಷ್ಟವಷಾತ್ ಯಾವುದೇ ಪ್ರಯೋಜನವಾಗಿಲ್ಲ. ಆಸ್ಪತ್ರೆಗೆ ತಹಶೀಲ್ಧಾರ್ ಮತ್ತು ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಸ್ಮಯ ನ್ಯೂಸ್, ಶಿರಸಿ

Back to top button