Important
Trending

ದೇವರ ಕೋಣೆಯ ಬಂಗಾರದ ಆಭರಣ,ನಗದು & ಮೊಬೈಲ್ ಕದ್ದ ಕಳ್ಳರು ಅಂದರ್ ? ಯಶಸ್ವಿ ಕಾರ್ಯಾಚರಣೆ

ಅಂಕೋಲಾ: ಕಳೆದ ತಿಂಗಳು ತಾಲೂಕಿನ ಗ್ರಾಮೀಣ ಪ್ರದೇಶದ ಮನೆ ಒಂದರ ದೇವರಕೋಣೆಯ ಗೋದ್ರೇಜ್ ಕಪಾಟಿನಲ್ಲಿಟ್ಟಿದ್ದ ಬಂಗಾರದ ಆಭರಣ, ಮೊಬೈಲ್ ಫೋನ್ ಮತ್ತು ನಗದು ಹಣ ಕಳ್ಳತನದ ಪ್ರಕರಣಕ್ಕೆ ಸಂಬoಧಿಸಿದoತೆ,ಕಳ್ಳತನವಾಗಿದ್ದ ಸ್ಪತ್ತುಗಳ ಸಮೇತ ಇಬ್ಬರು ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಕೊಂಡಿದ್ದಾರೆ.

ಕಳೆದ ಏಪ್ರಿಲ್ 04 ರಂದು ಅಣ್ಣ ಹಾಗೂ ತಂಗಿ ವಾಸಿಸುತ್ತಿದ್ದ ಡೋಂಗ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ದಳ್ಳಿ ಗ್ರಾಮದ ವಾಸದ ಮನೆಯ ದೇವರ ಕೋಣೆಯಲ್ಲಿ ಗೋದ್ರೇಜ್ ಕಪಾಟಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿತ್ತು. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳಾದ ನಾರಾಯಣ ಸಿದ್ದಿ, ರವಿ ಸಿದ್ದಿ ಇವರನ್ನು ವಶಕ್ಕೆ ಪಡೆದು, ಆರೋಪಿತರ ಕಡೆಯಿಂದ ಬಂಗಾರದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಮುಂತಾದ ಮೊತ್ತದ ಸ್ವತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ತನಿಖೆ ಮುಂದುವರೆದಿದೆ. ಅಂಕೋಲಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಈ ಪತ್ತೆ ಕಾರ್ಯವನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ ವರಿಷ್ಠಾಧಿಕಾರಿಗಳಾದ ಡಾ॥ ವಿಷ್ಣುವರ್ದನ್ ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ.ಟಿ ಜಯಕುಮಾರ ಹಾಗೂ ಪೊಲೀಸ್ ಉಪಾಧೀಕ್ಷಕರಾದ ಗಿರೀಶ ಎಸ್ ವಿ ರವರು ಅಭಿನಂದಿಸಿ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button