ಕರ್ನಾಟಕ, ಗೋವಾ, ಕರಾವಳಿಯ ಸಮೀಪದಲ್ಲಿ ಚಂಡಮಾರುತ ಚಲಾವಣೆಯಾಗುವ ಸಾಧ್ಯತೆಯಿದ್ದು, ಮುಂದಿನ 48 ಗಂಟೆಗಳಲ್ಲಿ ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೌದು, ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕೇರಳಾದಲ್ಲಿ ಭಾರೀ ಮಳೆಯಾಗುತ್ತಿದೆ. ಅದೇ ಚಂಡಮಾರುತ ಕ್ರಮೇಣ ಭಾರತದ ಪಶ್ಚಿಮ ಕರಾವಳಿಯನ್ನು ಪೂರ್ತಿಯಾಗಿ ಹಬ್ಬುವ ಸಾಧ್ಯತೆಗಳಿದ್ದು, ಪರಿಣಾಮ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮೀನುಗಾರಿಕೆಗೆ ತೆರಳಿದ್ದ ವೇಳೆ ಪ್ರವಾಸಿ ಬೋಟ್ ಡಿಕ್ಕಿ: ನೀರಿನಲ್ಲಿ ಬಿದ್ದ ತಂದೆ: ಮಗನ ಕೈಗೆ ಗಂಭೀರ ಗಾಯ
ಕರಾವಳಿಗೆ ಹೊಂದಿಕೊoಡಿರುವ ಅರಬ್ಬೀ ಸಮುದ್ರದಲ್ಲಿ ಭೀಕರ ಚಂಡಮಾರುತ ಎದ್ದಿದ್ದು, ಮೇ 26 ರ ಮಧ್ಯಾಹ್ನದೊಳಗೆ ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಪ್ರಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ. ಚಂಡಮಾರುತದ ಪರಿಚಲನೆಯು ದಕ್ಷಿಣ ಕೇರಳದ ಮೇಳೆ ಕೆಳ ಮತ್ತು ಮಧ್ಯಮ ಉಷ್ಣವಲಯದ ಮಟ್ಟದಲ್ಲಿದೆ.
ಅದರ ಪ್ರಭಾವದ ಅಡಿಯಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು ಮಿಂಚು ಮತ್ತು ಬಿರುಗಾಳಿಯು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಸಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕೇಂದ್ರ ಪ್ರಕಟಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,