ಬಸ್ ನಿಲ್ದಾಣದ ಅವಸ್ಥೆ ನೋಡಿ? ಪ್ರಯಾಣಿಕರ ಪರದಾಟ

ಸಿದ್ದಾಪುರ: ಹಾರ್ಸಿಕಟ್ಟಾ ಸಮೀಪದ ಕೋಣೆಗದ್ದೆ ಕ್ರಾಸ್ ಬಳಿಯಿರುವ ಕೋಣೆಗದ್ದೆ ಬಸ್ ನಿಲ್ದಾಣ ಶಿಥಿಲಾವಸ್ಥೆಗೆ ತಲುಪಿದ್ದು ಪ್ರಯಾಣಿಕರ ಉಪಯೋಗ ಕ್ಕೆ ಬಾರದ ಸ್ಥಿತಿಗೆ ತಲುಪಿದೆ. ಕೂಡಲೇ ಸಂಬoಧ ಪಟ್ಟ ಅಧಿಕಾರಿಗಳು ಜನಪ್ರತಿನಿದಿನಗಳು ಕ್ರಮ ಕೈ ಗೊಂಡು ಪ್ರಯಾಣಿಕರಿಗೆ ಆಗುವ ತೊಂದರೆ ತಪ್ಪಿಸಿ ಎಂದು ಸಾಮಾಜಿಕ ಕಾರ್ಯಕರ್ತ ಲೋಕೇಶ್ ಹೆಗಡೆ ಒತ್ತಾಯ ಮಾಡಿದ್ದಾರೆ.ಸೂಕ್ತ ನಿರ್ವಹಣೆ ಇಲ್ಲದೆ ಬಸ್ ನಿಲ್ದಾಣ ಸಾರ್ವಜನಿಕರ ಉಪಯೋಗ ಕ್ಕೆ ಬಾರದಂತಾಗಿದೆ, ಪಕ್ಕದ ಮಾರಾಟ ಮಳಿಗೆ ಯಲ್ಲಿ ಕಸ ಕಡ್ಡಿಗಳು ತುಂಬಿಕೊoಡು ಹಾವು ಚೇಳು ವಿಷ ಜಂತುಗಳು ಸೇರಿಕೊಳ್ಳುವಂತಾಗಿದ್ಫು ಒಂದು ವೇಳೆ ಪ್ರಯಾಣಿಕರು ಬಸ್ ನಿಲ್ದಾಣವನ್ನ ಬಳಸಿದರೆ ಪ್ರಾಣಪಾಯ ಎದುರಿಸಬೇಕಾದ ಅನಿವಾರ್ಯತೆ ಉಂಟಾಗಿದೆ.

ಈಗಾಗಲೇ ಮಳೆ ಸುರಿಯುತ್ತಿದ್ದು ಬಸ್ ಗಾಗಿ ಕಾಯುವ ಪ್ರಯಾಣಿಕರು ಪರದಾಡುವಂತೆ ಆಗಿದೆ ಬಸ್ ನಿಲ್ದಾಣದ ಅಕ್ಕಪಕ್ಕದಲ್ಲಿರುವ ಅಂಗಡಿಗಳಲ್ಲಿ ನಿಂತು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬoಧಪಟ್ಟ ಇಲಾಖೆ ಅಧಿಕಾರಿಗಳು, ಜನಪ್ರತಿನಿದಿನಗಳು ಸೂಕ್ತ ರೀತಿ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿಬಂದಿದೆ.ಬಸ್ ನಿಲ್ದಾಣದ ಒಳಗಡೆ ಮತ್ತು ಸುತ್ತಮುತ್ತ ಸ್ವಚ್ಛಗೊಳಿಸಿ ಮಳೆಗಾಲದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ,ಪ್ರಯಾಣಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಶೋಕ್ ನಾಯ್ಕ್ ಹಾರ್ಸಿಕಟ್ಟಾ ಗ್ರಾಮ ಪಂಚಾಯಿತಿ ಸದಸ್ಯರು.

ವಿಸ್ಮಯ ನ್ಯೂಸ್, ಸಿದ್ದಾಪುರ

Exit mobile version