ಮೇ 31ರಂದು ರಾಜ್ಯಕ್ಕೆ ಮುಂಗಾರು ಮಳೆಯ ಆಗಮನ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ರಂದು ರಾಜ್ಯಕ್ಕೆ ಮುಂಗಾರು ಮಳೆಯ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಳೆಯು ಮೇ 31ರಂದು ಕೇರಳ ಮೂಲಕ ರಾಜ್ಯ ಪ್ರವೇಶಿಸಲಿದ್ದು, ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ಹೀಗಾಗಿ ಹವಾಮಾನ ಇಲಾಖೆ ಅಧಿಕಾರಿಗಳು ಕೂಡ ಮುಂಗಾರು ಮಾರುತಗಳ ಚಲನವಲನ ಪರಿಶೀಲನೆ ಮಾಡಿ, ರೈತರಿಗೆ ಮಾಹಿತಿ ನೀಡುತ್ತಿದ್ದಾರೆ. ಮೇ 31ರವರೆಗೆ ರಾಜ್ಯದ ಬಹುತೇಕ ಭಾಗ ಗಳಲ್ಲಿ 40-50 ಕಿಮೀ ವೇಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version