ಕುಮಟಾ: ಕಡಲ ತೀರದಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ಆಮೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಆರೈಕೆ ಮಾಡಿ, ಚಿಕಿತ್ಸೆ ನೀಡಿದ್ದಾರೆ. ಕುಮಟಾ ತಾಲೂಕಿನ ಬಾಡದ ಗುಡೇಅಂಗಡಿಯ ಕಡಲ ತೀರದಲ್ಲಿ ಮೀನುಗಾರರ ಬೆಲೆಗೆ ಸಿಲುಕೋ ಅಥವಾ ಇನ್ಯಾವುದೋ ಕಾರಣದಿಂದಾಗಿ ಅಳಿವಿನಂಚಿನಲ್ಲಿರುವ ಆಮೆಯೊಂದು ತನ್ನ ಬಲಭಾಗದ ರೆಕ್ಕೆ ಕತ್ತರಿಸಿಕೊಂಡ ಸ್ಥಿತಿಯಲ್ಲಿ ಸಮುದ್ರ ತೀರದಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿತ್ತು.
ಇದನ್ನು ಗಮನಿಸಿದ ಸ್ಥಳೀಯರೋರ್ವರು ರಕ್ಷಣೆ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕರೆಗೆ ಸ್ಪಂದಿಸಿ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಆಮೆಯನ್ನು ಕುಮಟಾದ ತಮ್ಮ ಕಚೇರಿಗೆ ಕೊಂಡೊಯ್ದು ಕುಂದಾಪುರದಿoದ ವೈದ್ಯರನ್ನು ಕರೆಯಿಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಆಮೆಯನ್ನು ಆರೈಕೆ ಮಾಡಿ, ಅದಕ್ಕೆ ನೀರಿನಲ್ಲಿ ಈಜುವ ಸಾಮರ್ಥ್ಯ ಬಂದ ಬಳಿಕ ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ