ಉಗ್ರಸಂಘಟನೆ ಜೊತೆ ನಂಟು: ಶಿರಸಿಯಲ್ಲಿ ಓರ್ವನ ಬಂಧನ

ಶಿರಸಿ: ಉಗ್ರಸಂಘಟನೆ ಜೊತೆ ನಂಟು ಆರೋಪ ಮತ್ತು ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆಗೆ ಉತ್ತೇಜನ ನೀಡಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ಪ್ರಾಥಮಿಕ ವಿಚಾರಣೆ ಬಳಿಕ ಆರೋಪಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: Bank of Baroda Recruitment: 627 ಹುದ್ದೆಗಳಿಗೆ ನೇಮಕಾತಿ: ಪದವಿ ಆದವರು ಅರ್ಜಿ ಸಲ್ಲಿಸಿ

ಆರೋಪಿ ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆ ಸೃಷ್ಟಿಸುವಂತೆ ಉತ್ತೇಜನ ನೀಡಿ, ಬರೆಯುತ್ತಿದ್ದ. ಅಲ್ಲದೆ, ಬೇರೆ ಬೇರೆ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಎಂಬ ಆರೋಪ ಕೇಳಿಬಂದಿದೆ. ಬಂಧಿತ ಆರೋಪಿ, ದಾಸನಕೊಪ್ಪ ನಿವಾಸಿ ಅಬ್ದುಲ್ ಶಕೂರ್ ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version