ಕಾಡುಹಂದಿ ಬೇಟೆ: ಇಬ್ಬರ ಬಂಧನ

ಬನವಾಸಿ: ಕಾಡುಹಂದಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬನವಾಸಿ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಬನವಾಸಿ ಸಮೀಪದ ಸಂತೊಳ್ಳಿಯ ಬಸವರಾಜ ಯಲ್ಲಪ್ಪ ಚೆನ್ನಯ್ಯ ಹಾಗೂ ಹೆಬ್ಬತ್ತಿಯ ಉಮೇಶ ಚನ್ನಪ್ಪ ಚೆನ್ನಯ್ಯ ಬಂಧಿತ ವ್ಯಕ್ತಿಗಳಾಗಿದ್ದಾರೆ.

ಇವರಿಬ್ಬರು ತಾಲೂಕಿನ ಅಂಡಗಿ ಅರಣ್ಯ ವ್ಯಾಪ್ತಿಯಲ್ಲಿ ಕಾಡುಹಂದಿ ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಸಿಬ್ಬಂದಿಗಳು ಪರಿಶೀಲನೆಗೆ ತೆರಳಿದ್ದಾಗ ಕಾಡಿನಲ್ಲಿ ಪರಾರಿಯಾಗಿ ನಾಪತ್ತೆಯಾಗಿದ್ದರು. ಈ ವೇಳೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version