Rain Alert: ಮತ್ತೆ ಅಬ್ಬರಿಸಲಿದೆ ಮಳೆ: ರೆಡ್ ಅಲರ್ಟ್ ಘೋಷಣೆ: ಎಲ್ಲೆಲ್ಲಿ ಭಾರೀ ಮಳೆ ನೋಡಿ?

ಕಾರವಾರ: ಕೆಲ ದಿನಗಳಿಂದ ತಣ್ಣಗಾಗಿರುವ ಮುಂಗಾರು ಮಳೆಯು ಶುಕ್ರವಾರದಿಂದ ಮತ್ತೆ ಅಬ್ಬರಿಸಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಜೂನ್ 21 ರಿಂದ ಭಾರೀ ಪ್ರಮಾಣದ ಮಳೆಯಾಗಲಿದ್ದು, ನದಿ ತೀರದ ನಿವಾಸಿಗಳಿಗೆ ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಜೂನ್ 21 ರಿಂದ ಜೂನ್ 23ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಮಾಹಿತಿ ನೀಡಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version