Follow Us On

WhatsApp Group
Important
Trending

ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ಮನೆಯಲ್ಲಿ ಬೆಂಕಿ ಅನಾಹುತ

ಯಲ್ಲಾಪುರ: ಮಾಜಿ ಸಂಸದ ಅನಂತಕುಮಾರ ಹೆಗಡೆಯ ಮನೆಯ ಜಿಮ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಹೌದು, ಅವರ ಮನೆಯ ಜಿಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಐದು ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎನ್ನಲಾಗಿದೆ. ಬೆಳಗಿನ ಜಾವ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ.

Job News: Bank of Baroda Recruitment: 627 ಹುದ್ದೆಗಳಿಗೆ ನೇಮಕಾತಿ: ಪದವಿ ಆದವರು ಅರ್ಜಿ ಸಲ್ಲಿಸಿ

ಘಟನೆ ವೇಳೆ ಮಾಜಿ ಸಂಸದರು ಮತ್ತು ಅವರ ಕುಟುಂಬದವರು ಮನೆಯಲ್ಲಿ ಇಲ್ಲ ಎನ್ನಲಾಗಿದ್ದು, ಕಾವಲುಗಾರ ಬೆಂಕಿ ಬಿದ್ದಿರುವ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾನೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button