Recruitment 2024: ಬೃಹತ್ ನೇಮಕಾತಿ: 8 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ: SSLC ಆದವರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಜುಲೈ 31, 2024 ಕೊನೆಯ ದಿನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 8,326 ಹುದ್ದೆಗಳ ನೇಮಕಾತಿಗೆ ( Recruitment 2024) ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ವಿಶ್ವವಿದ್ಯಾಲಯದಿಂದ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ಆಕರ್ಷಕ ವೇತನ ನಿಗದಿಪಡಿಸಲಾಗಿದೆ. ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ, ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ಪರೀಕ್ಷೆಗಳು ನಡೆಯಲಿದೆ.

ಇನ್ನೂ ಓದಿ: ಇತ್ತಿಚಿನ ಸರ್ಕಾರಿ, ಖಾಸಗಿ ಉದ್ಯೋಗಾವಕಾಶದ ಸುದ್ದಿಗಳು

Recruitment 2024: ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಮ್‌ಟಿಎಸ್) 4,887 ಮತ್ತು ಹವಾಲ್ದಾರ್ 3,439 ಹುದ್ದೆಗಳಿಗೆ ಪರೀಕ್ಷೆಗಳು ನಡೆಯಲಿವೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ಜರುಗಲಿದೆ.

ಇಲಾಖೆಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ
ಒಟ್ಟು ಹುದ್ದೆಗಳು8326
ಅರ್ಜಿ ಸಲ್ಲಿಕೆ ವಿಧಾನOnline
ವಿದ್ಯಾರ್ಹತೆSSLC

ಎಸ್ಸಿ-ಎಸ್ಟಿ, ಮಾಜಿ ಸೈನಿಕ ಹಾಗು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ವಿಧಿಸಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31, 2024 ಕೊನೆಯದಿನವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.

ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕಜೂನ್ 28, 2024
ಅರ್ಜಿ ಸಲ್ಲಿಕೆ ಆರಂಭಜುಲೈ 31, 2024

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version