Important
Trending

ಮೀನು ಹಿಡಿಯಲು ತೆರಳಿದ್ದ ವೇಳೆ ನೀರಿಗೆ ಬಿದ್ದು ಸಾವು

ಗೋಕರ್ಣ: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬ ನೀರಿಗೆ ಬಿದ್ದು ಮೃತಪಟ್ಟ ಘಟನೆ ಅಘನಾಶಿನಿ ನದಿಯ ದಡದ ಗಜನಿಯಲ್ಲಿ ನಡೆಡದಿದೆ. ಕುಮಟಾ ತಾಲೂಕಿನ ಹಿರೇಗುತ್ತಿ ನುಶಿಕೋಟೆಯ ನಿವಾಸಿ ರಮೇಶ ನಾರಾಯಣ ಹರಿಕಾಂತ ಎಂಬಾತನೇ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಅಘನಾಶಿನಿ ನದಿಯ ದಡದ ಗಜನಿಯಲ್ಲಿ ಮೀನು ಹಿಡಿಯಲು ತೆರಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕುಮಟಾ ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಮೃತನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಕುರಿತಂತೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಗೋಕರ್ಣ

Back to top button