Important
Trending

ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನ ಮರ – ಓರ್ವ ವ್ಯಕ್ತಿಗೆ ಗಾಯ

ಸಿದ್ದಾಪುರ: ಭಾರಿ ಗಾಳಿ-ಮಳೆಗೆ ವಾಸದ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾದ ಘಟನೆ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಿಗಾರನಲ್ಲಿ ನಡೆದಿದೆ. ಸೀತಾರಾಮ ಕೃಷ್ಣ ಗೌಡ ಇವರ ಮನೆ ಮೇಲೆ ತೆಂಗಿನಮರ ಬಿದ್ದು ಭಾಗಶಃ ಹಾನಿಯಾಗಿದೆ. ಸುಮಾರು 40 ಸಾವಿರ ರೂಪಾಯಿ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯವಾಗಿದ್ದು ಚಿಕಿತ್ಸೆ ಪಡೆದಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಸ್ಥಳೀಯ ಗ್ರಾಮ ಪಂಚಾಯತ ಅಧಿಕಾರಿಗಳು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button