ಕಾರವಾರ: ಕರಾವಳಿಯ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಇನ್ನು ನಾಲ್ಕರಿಂದ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮಹಾರಾಷ್ಟçದಿಂದ ಕೇರಳದವರೆಗಿನ ಕರಾವಳಿಯಲ್ಲಿ ದಟ್ಟಮೋಡ ಇರುವುದರಿಂದ ಕರಾವಳಿಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ರೆಡ್ ಅಲರ್ಟ ನೀಡಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಅಧಿಕ ಮಳೆಯಾಗುವುದರಿಂದ ನದಿ ತೀರದ ನಿವಾಸಿಗಳಿಗೆ ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,