Important
Trending

ಮುಂದುವರಿದ ಮಳೆ ಆರ್ಭಟ: ನಾಳೆ ಎಲ್ಲೆಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅದರಲ್ಲೂ ಕುಮಟಾ ಮತ್ತು ಹೊನ್ನಾವರ, ಭಟ್ಕಳ, ಕಾರವಾರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ ಮತ್ತು ಕಾರವಾರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ ಘೋಷಿಸಲಾಗಿದೆ. ಸಿದ್ದಾಪುರ ತಾಲೂಕಿನ ದೊಡ್ಮನೆಯಲ್ಲಿ ರಾಜ್ಯದಲ್ಲಿಯೇ ಅತಿಹೆಚ್ಚು ಅಂದರೆ 366 ಮಿಮಿ ಮಳೆಯಾಗಿದೆ.

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿ ಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ, ಮೆಸೆಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಮಾಹಿತಿ ನೀಡಲಾಗಿದೆ. ಸಂಪರ್ಕ ಸಂಖ್ಯೆ: 1077 ಅಥವಾ 94835 11015 .

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button