Follow Us On

WhatsApp Group
Important
Trending

ಮುಂದುವರಿದ ವರುಣನ ಅಬ್ಬರ: ಇನ್ನು ಮೂರ್ನಾಲ್ಕು ದಿನಗಳ ಕಾಲ ಮತ್ತಷ್ಟು ಮಳೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜಿಲ್ಲೆಯ ಹಲವಾರು ತಾಲೂಕುಗಳಲ್ಲಿ ನೆರೆಯ ಪರಿಸ್ಥಿತಿ ಕಂಡುಬoದಿದೆ. ಹಲವಾರು ಪ್ರದೇಶಗಳು ಬಹುತೇಕ ಜಲಾವೃತಗೊಂಡಿದ್ದು ಸಂಚಾರ ಅಸ್ಥವ್ಯಸ್ಥಗೊಂಡಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರುಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳು ಹಾಗೂ ನದಿ ತೀರದ ಪ್ರದೇಶಗಳಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ ಘೋಷಿಸಲಾಗಿದೆ. ಸಿದ್ದಾಪುರ ತಾಲೂಕಿನ ದೊಡ್ಮನೆಯಲ್ಲಿ ರಾಜ್ಯದಲ್ಲಿಯೇ ಅತಿಹೆಚ್ಚು ಅಂದರೆ 366 ಮಿಮಿ ಮಳೆಯಾಗಿದೆ. ಹೆಚ್ಚಿನ ಮಳೆಯಾಗುವ ಸಾಧ್ಯತೆ ಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ಜಿಲ್ಲೆಗೆ ಆಗಮಿಸಿವೆ.

ಎನ್ ಡಿ ಆರ್ ಎಫ್ ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮಟಾ ಮತ್ತು ಅಂಕೋಲಾ ಭಾಗದಲ್ಲಿ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿ ಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ, ಮೆಸೆಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಮಾಹಿತಿ ನೀಡಲಾಗಿದೆ. ಸಂಪರ್ಕ ಸಂಖ್ಯೆ: 1077 ಅಥವಾ 94835 11015

ಬ್ಯೂರೋ ರಿಪೋಟ್ ವಿಸ್ಮಯ ನ್ಯೂಸ್….

Back to top button