ಮಳೆ ತಗ್ಗಿದ್ರು ಕಡಿಮೆಯಾಗದ ಆತಂಕ: ಜುಲೈ 8 ಮತ್ತು 9ರಂದು ಮತ್ತೆ ಭಾರೀ ಮಳೆಯ ಮುನ್ಸೂಚನೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಆದ್ರೆ, ಸ್ವಲ್ಪ ವರುಣನ ಆರ್ಭಟ ಕಡಿಮೆಯಾಗಿದ್ದು, ಹೀಗಾಗಿ ಪ್ರವಾಹ ಪರಿಸ್ಥಿತಿ ಕಡಿಮೆಯಾಗಿದೆ. ಕೇರಳ ಕರಾವಳಿಯಿಂದ ದಕ್ಷಿಣ ಗುಜರಾತ್‌ವರೆಗೂ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ಭಾರೀ ಮಳೆಯಾಗುತ್ತಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ ಉತ್ತರಕನ್ನಡ, ದಕ್ಷಿಣ ಕನ್ನಡ, ಹಾಗೂ ಉಡುಪಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ ಘೋಷಣೆ ಮಾಡಲಾಗಿದೆ. ಅಲ್ಲದೆ ಜುಲೈ 8 ಮತ್ತು 9ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ನದಿಗಳು ಮೈದುಂಬಿ ಹರಿಯುತ್ತಿರುವ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನಿಂತಿದೆ. ಈ ಪ್ರದೇಶದ ಒಟ್ಟು 128 ಕುಟುಂಬಗಳ 255 ಮಂದಿಯನ್ನು ಸುರಕ್ಷಿತ ಸ್ಥಳಗಳಲ್ಲಿ ತೆರದಿರುವ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಬೆಂಗಳೂರಿನಿAದ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆಯ 2 ತಂಡಗಳು ಯಾವುದೇ ತುರ್ತು ಕಾರ್ಯಚರಣೆಗೆ ಸಕಲ ರೀತಿಯಲ್ಲಿ ಸನ್ನದ್ದವಾಗಿವೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳ ಗಾದ ಹೊನ್ನಾವರ ಮತ್ತು ಕುಮಟಾ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಹೊನ್ನಾವರದಲ್ಲಿ 6, ಕುಮಟಾದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೇಂದ್ರ ತೆರೆದಿದ್ದು ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬAಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

Exit mobile version