Important
Trending

ಮುಂದುವರಿದ ಮಳೆ: ನಾಳೆಯೂ ಶಾಲಾ- ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಹಲವೆಡೆ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ಕೂಡಾ ಆಗಮಿಸಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ನಾಳೆಯೂ ( ಜುಲೈ-9 ) ರಜೆ ಘೋಷಣೆ ಮಾಡಲಾಗಿದೆ. ಕುಮಟಾ-ಹೊನ್ನಾವರ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button