ಭಾರೀ ಮಳೆ: 109 ಮನೆಗಳಿಗೆ ಹಾನಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಜುಲೈ 11 ವರೆಗೆ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಸೂಚನೆ ನೀಡಿದೆ.

ಇದರಿಂದಾಗಿ ನದಿ ಹಾಗೂ ಸಮುದ್ರ ತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಈಗಾಗಲೇ ಮಳೆಯ ಅಬ್ಬರ ಮುಂದುವರೆದಿದ್ದು ಬಹುತೇಕ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 109 ಮನೆಗಳಿಗೆ ಹಾನಿಯಾಗಿದೆ. 92 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 10 ಮನೆಗಳಿಗೆ ಹೆಚ್ಚಿನ ಹಾನಿ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 7 ಕ್ಕೂ ಹೆಚ್ಚಿನ ಮನೆಗಳಿಗೆ ಹಾನಿಯಾಗಿದ್ದು ಕಾರವಾರ ತಾಲೂಕಿನಲ್ಲಿ

ಮಳೆಯಿಂದಾಗಿ ಓರ್ವರ ಪ್ರಾಣಹಾನಿಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 171 ಮಂದಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ತೀವ್ರ ಮಳೆಯಿಂದಾಗಿ ತೊಂದರೆಗೊಳಗಾದ ವಿವಿಧ ಗ್ರಾಮದ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತರೆರಯುವಂತೆ ಸಂಬoಧಪಟ್ಟ ತಾಲೂಕುಗಳ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version