Important
Trending

ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್

ಕುಮಟಾ: ಪಟ್ಟಣದ ಹೊನ್ಮಾವ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ನದಿಗೆ ಉರುಳಿಬಿದ್ದಿದೆ. ಕಾಲಿ ಟ್ಯಾಂಕರ್ ಇದಾಗಿದ್ದು, ಸ್ಥಳಿಯರು ಯಾವುದೇ ಆತಂಕಪಡುವ ಅವಶ್ಯವಿಲ್ಲ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಕುಮಟಾ ಪೋಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button