ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ನೋಡಿ

ಕಾರವಾರ: ಉತ್ತರ ಗುಜರಾತ್‌ನಿಂದ ಉತ್ತರ ಕೇರಳದವರೆಗೂ ಸಮುದ್ರಮಟ್ಟದಲ್ಲಿ ದಟ್ಟ ತೇವಾಂಶ ಭರತಿ ಮೋಡಗಳು ಇರುವುದರಿಂದ ಮುಂದಿನ 5 ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 55 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದ್ದು, ಹೈ ವೇವ್ ಅಲರ್ಟ್ ಹಾಗೂ ಜುಲೈ 15 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಜುಲೈ 17 ರ ವರೆಗೆ ಬಾರೀ ಮಳೆಯಾಗಲಿದ್ದು ಮುಂದಿನ 2 ದಿನ ರೆಡ್ ಅಲರ್ಟ್ ಇರಲಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಜುಲೈ 14, 15ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸುರಿದ ಮಳೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಮಳೆಯಾಗಿದೆ ಎಂದು ಮಳೆ ಮಾಪನ ಕೇಂದ್ರ ತಿಳಿಸಿದೆ.

ಇನ್ನೂ ಕೆಲವು ದಿನಗಳ ಕಾಲ ಈ ಮಳೆಯ ಪ್ರಮಾಣ ಅಧಿಕವಾಗಿರಲಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರಿಗೆ ಜಲಪಾತ ಹಾಗೂ ಸಮುದ್ರದ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಮಳೆಯ ಅವಧಿಯಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬದ ಬಳಿ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿAದ ದೂರ ಇರಬೇಕು. ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಕೂಡಲೇ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಬ್ಯುರೋ ರಿಪೋರ್ಟ್ ವಿಸ್ಮಯ ನ್ಯೂಸ್..

Exit mobile version