ಕರಾವಳಿ ಕಾವಲು ಪೊಲೀಸ್ ಠಾಣೆಯ ಆವರಣದಲ್ಲಿ ಉಚಿತ ಕಾರ್ಯಾಗಾರ

ಪಿಎಸ್‌ಐ ಮತ್ತು ಕಾನ್ಸಟೇಬಲ್ ಹುದ್ದೆಯ ಆಕಾಂಕ್ಷಿಗಳು ಭಾಗಿ
ಆಯ್ಕೆ ಪ್ರಕ್ರಿಯೆ, ಅರ್ಹತೆ, ಮಾನದಂಡ ಕುರಿತು ಮಾಹಿತಿ

[sliders_pack id=”3498″]

ಕುಮಟಾ : ತಾಲೂಕಿನ ಪಿ.ಎಸ್.ಐ ಮತ್ತು ಪೊಲೀಸ್ ಕಾನ್ಸಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಶನಿವಾರ ಕರಾವಳಿ ಕಾವಲು ಪೊಲೀಸ್ ಠಾಣೆಯ ಆವರಣದಲ್ಲಿ ಉಚಿತ ಕಾರ್ಯಾಗಾರ ಶಿಬಿರ ಏರ್ಪಡಿಸಲಾಗಿತ್ತು.
ಠಾಣೆಯ ವೃತ್ತ ನಿರೀಕ್ಷಕ ಮಾರುತಿ ಜಿ. ನಾಯಕ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಪೊಲೀಸ್ ಇಲಾಖೆ ಒಂದು ಮಹತ್ವ ಪೂರ್ಣ ಇಲಾಖೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಮತ್ತು ಜಿಲ್ಲೆಯ ಯುವಕರು ಸೇವೆ ಸಲ್ಲಿಸುವಂತಾಗಬೇಕು ಸ್ಪರ್ಧಾತ್ಮಕ ಜಗತ್ತಿನಲ್ಲಿ ಪರೀಕ್ಷೆಗಳನ್ನು ಎದುರಿಸಲು ಇಂತಹ ಕಾರ್ಯಾಗಾರಗಳು ದಿಕ್ಸೂಚಿಯಾಗುತ್ತವೆ. ಹೆಚ್ಚು ಹೆಚ್ಚು ಸಾಮಾನ್ಯ ಜ್ಞಾನ ಬೆಳೆಸಿಕೊಂಡು ಎಲ್ಲರೂ ಯಶಸ್ಸು ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದರು.


ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿದ್ದ ಶ್ರೀರಾಮ ಸ್ಟಡಿ ಸರ್ಕಲ್ ನಿರ್ದೇಶಕ ಸೂರಜ ನಾಯಕ, ಪೊಲೀಸ್ ಇಲಾಖೆಯ ಆಯ್ಕೆ ಪ್ರಕ್ರಿಯೆ, ಅರ್ಹತೆ, ಮಾನದಂಡ ಮತ್ತು ಪರೀಕ್ಷೆಯನ್ನು ಎದುರಿಸಲು ತೆಗೆದುಕೊಳ್ಳಬೇಕಾದ ಸಿದ್ಧತೆಗಳ ಕುರಿತು ತಿಳಿಹೇಳಿದರು.


ಹೆಗಡೆ, ವನ್ನಳ್ಳಿ, ಗೋಕರ್ಣ, ಧಾರೇಶ್ವರ ಹಾಗೂ ತಾಲೂಕಿನ ಇತರೆಡೆಯಿಂದ ಸುಮಾರು 45 ಆಕಾಂಕ್ಷಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಕರೊನಾ ಹಿನ್ನಲೆಯಲ್ಲಿ ಸಾಮಾಜಿಕ ಅತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತು. ಇಲಾಖೆಯ ಸಿಬ್ಬಂದಿಗಳು ಮತ್ತು ಶ್ರೀರಾಮ ಸ್ಟಡಿ ಸರ್ಕಲ್ ಸಿಬ್ಬಂದಿಗಳು ಸಹಕರಿಸಿದರು.


ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 784883356

Exit mobile version