ಮಳೆ ಅವಾಂತರ: ಕುಸಿದುಬಿದ್ದ ಮನೆ

ಸಿದ್ದಾಪುರ: ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದಾಗಿ ಮನೆಯೊಂದು ಸಂಪೂರ್ಣವಾಗಿ ನೆಲಸಮಗೊಂಡ ಘಟನೆ ತಾಲೂಕಿನ ವಾಜಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಸೂರಿನಲ್ಲಿ ನಡೆದಿದೆ. ದ್ಯಾವರಿ ತಿಮ್ಮ ನಾಯ್ಕ್ ಐಸುರ್ ಇವರ ವಾಸದ ಮನೆ ರಾತ್ರಿ ಸುರಿದ ಭಾರಿ ಮಳೆಗೆ ಕುಸಿದುಬಿದ್ದಿದೆ. ಮನೆಯ ಮೇಲ್ಛಾವಣಿಗೆ ಹಾಕಿದ್ದ ಮರದ ಗಳಗಳು ಮುರಿದು ಹಂಚುಗಳು ಒಡೆದು ನೆಲಸಮವಾಗಿದೆ.

ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಮೂರ್ತಿ ನಾಯ್ಕ್ ಐಸೂರ್ ಭೇಟಿ ನೀಡಿ ಸರ್ಕಾರದಿಂದ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ . ಕೆಲ ದಿನಗಳ ಹಿಂದೆ ಈ ಮನೆ ಹಿಂಭಾಗದ ಗೋಡೆ ಬಿದ್ದು ಹಾನಿಯಾಗಿತ್ತು. ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮನೆಯಲ್ಲಿ ವಾಸ್ತವ ಇರದಂತೆ ಸೂಚನೆ ನೀಡಿದ್ದರು.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Exit mobile version