Follow Us On

WhatsApp Group
Trending

ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ‌‌ ಮುಂದುವರಿದಿದ್ದು, ಹಲವೆಡೆ ಗುಡ್ಡ ಕುಸಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ‌ ಕ್ರಮವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕುಮಟಾ, ಹೊನ್ನಾವರ, ಭಟ್ಕಳ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ , ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ( ಜುಲೈ 18) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button